Breaking News

ಡ್ರಗ್ಸ್ ಅಮಲಿನಲ್ಲಿ ಯುವಕನ ಬರ್ಬರ ಹತ್ಯೆ: ಮೃತದೇಹದ ಎದುರು ನಿಂತು ವಿಡಿಯೋ ಮಾಡಿದ ಆರೋಪಿಗಳು

ಹಾಸನ: ಡ್ರಗ್ಸ್ ಅಮಲಿನಲ್ಲಿ ಯುವಕನನ್ನು ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ದುಷ್ಕರ್ಮಿಗಳು, ಹತ್ಯೆಯ ಬಳಿಕ ಮೃತದೇಹದ ಎದುರು ನಿಂತು ವಿಡಿಯೋ ಚಿತ್ರೀಕರಿಸಿರುವ ಅಮಾನವೀಯ ಕೃತ್ಯ ಹಾಸಗ ನಗರದ ಹೊರವಲಯದಲ್ಲಿ ನಡೆದಿದೆ.ಹೊಳೆನರಸೀಪುರ ರಸ್ತೆಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಈ ಕೊಲೆ ನಡೆದಿದೆ.ಕೊಲೆಯಾದವನ ಗುರುತು ಪತ್ತೆಯಾಗಿಲ್ಲ. ವೈರಲ್ ವೀಡಿಯೊದಲ್ಲಿ ನಾವು ಕೊಲೆ ಮಾಡಿದ್ದೇವೆ ಎಂದು ಯುವಕನೋರ್ವ ಮೃತದೇಹವನ್ನು ತೋರಿಸುತ್ತಿರುವುದು ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು, ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ಹಾಗೂ ಹತ್ಯೆಯ ಹಿಂದಿರುವ ಕಾರಣ ಪತ್ತೆಹಚ್ಚಲು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *