ಗದಗ: ಭ್ರಷ್ಟ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಬೆಳ್ಳಂಬೆಳ್ಳಿಗೆ ಲೋಕಾಯುಕ್ತರು ದಾಳಿ ಮಾಡಿದ ಘಟನೆ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ. ಶಿರಹಟ್ಟಿ ತಾಲೂಕು ಪಶು ವೈದ್ಯಾಧಿಕಾರಿ ನಿಂಗಪ್ಪ ಓಲೇಕಾರ ಎಂಬ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ದಾಳಿಯಾಗಿದೆ.ಅಕ್ರಮ ಆಸ್ತಿ ಗಳಿಕೆ ಆರೋಪದ ದೂರಿನ ಮೇರೆಗೆ ಲೋಕಾಯುಕ್ತರು ಎರಡು ಕಡೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಗದಗ ಡಿವೈಎಸ್ಪಿ ವಿಜಯ್ ಬಿರಾದಾರ ಹಾಗೂ ಇನ್ಸ್ಪೆಕ್ಟರ್ ವೆಂಕಟೇಶ್ ಯಡಹಳ್ಳಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಪಶು ವೈದ್ಯಾಧಿಕಾರಿ ನಿಂಗಪ್ಪ ಓಲೇಕಾರನನ್ನು ವಶಕ್ಕೆ ಪಡೆದು ಲೋಕಾ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಮನೆ ಹಾಗೂ ಕಚೇರಿಯಲ್ಲಿ ಎರಡೂ ಕಡೆಗಳಲ್ಲಿ ದಾಖಲೆಗಳ ಪರಿಶೀಲನೆ ಮುಂದುವರೆದಿದೆ. ಈ ಕುರಿತು ಗದಗ ಜಿಲ್ಲೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

