Breaking News

ಬೈಕ್ – ಬಸ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಮೃತ್ಯು

ಹಾಸನ: ಅರಕಲಗೂಡು ತಾಲ್ಲೂಕಿನ ಕೊಣನೂರು ಗ್ರಾಮದಲ್ಲಿ ಬೈಕ್ ಹಾಗೂ ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.ಅರಕಲಗೂಡು ತಾಲೂಕು ಕೆರೆಕೋಡಿ ಗ್ರಾಮದ ಅನಿಲ್ (28) ಹಾಗೂ ಹೊನ್ನೇಗೌಡ (30) ಎಂಬವರು ಮೃತ ದುರ್ದೈವಿಗಳು.ಕೊಣನೂರು ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗದಲ್ಲಿ ಸಾರಿಗೆ ಸಂಸ್ಥೆ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಅನಿಲ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡ ಹೊನ್ನೇಗೌಡ ಅವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು.ಆದರೂ, ಅಷ್ಟರಲ್ಲೇ ಪ್ರಾಣಬಿಟ್ಟಿದ್ದಾರೆ. ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *