Breaking News

ಹೈದರಾಬಾದ್‌: ಮೂರು ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ

ಇಲ್ಲಿನ ರಾಜೀವ್‌ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಆರ್‌ಜಿಐಎ) ಬರುತ್ತಿದ್ದ ಮೂರು ವಿಮಾನಗಳಲ್ಲಿ ಬಾಂಬ್‌ ಇರಿಸಿರುವುದಾಗಿ ದುಷ್ಕರ್ಮಿಗಳು ಬೆದರಿಕೆ ಸಂದೇಶ ಕಳುಹಿಸಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಪಾಸಣೆ ನಡೆಸಿದ ಬಳಿಕ ಇದು ಹುಸಿ ಸಂದೇಶ ಎಂಬುದು ದೃಢಪಟ್ಟಿದೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ.ಬ್ರಿಟನ್‌ನ ಹೀಥ್ರೋದಿಂದ ಬರುತ್ತಿದ್ದ ಬ್ರಿಟಿಷ್‌ ಏರ್‌ವೇಸ್‌ನ ವಿಮಾನ (ಬಿಎ277) ಹಾಗೂ ಫ್ರಾಂಕ್‌ಫರ್ಟ್‌ನಿಂದ ಆಗಮಿಸುತ್ತಿದ್ದ ಲುಫ್ತಾನ್ಸಾ (ಎಲ್‌ಎಚ್‌ 752), ಕಣ್ಣೂರಿನಿಂದ ಬರುತ್ತಿದ್ದ ಇಂಡಿಗೊ (6ಇ 7178) ವಿಮಾನಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂಬ ಇ-ಮೇಲ್‌ ಸಂದೇಶವನ್ನು ಏರ್‌ಪೋರ್ಟ್‌ನ ಕಸ್ಟಮರ್‌ ಸಪೋರ್ಟ್‌ ವಿಭಾಗಕ್ಕೆ ಭಾನುವಾರ ತಡರಾತ್ರಿ ಕಳುಹಿಸಲಾಗಿತ್ತು.ತಕ್ಷಣವೇ ಎಚ್ಚೆತ್ತುಕೊಂಡ ಸಿಬ್ಬಂದಿ ಎಲ್ಲಾ ಆಯಾಮದ ಭದ್ರತಾ ಪರಿಶೀಲನೆಗಳನ್ನು ನಡೆಸಿದ್ದಾರೆ. ಯಾವುದೇ ರೀತಿ ಅನುಮಾನಸ್ಪದ ಸಂಗತಿ, ವಸ್ತು ಕಂಡುಬಂದಿಲ್ಲ. ವಿಮಾನಗಳು ಕೂಡ ಸುರಕ್ಷಿತವಾಗಿ ಲ್ಯಾಂಡ್‌ ಆಗಿವೆ. ಹೀಗಾಗಿ ಬೆದರಿಕೆಯನ್ನು ಹುಸಿ ಸಂದೇಶ ಎಂದು ಪರಿಗಣಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *