ಮುಜಾಫರ್‌ನಗರ: ಹಲವು ಪ್ರಕರಣಗಳಲ್ಲಿ ಕರ್ನಾಟಕ ಪೊಲೀಸರು ಹುಡುಕುತ್ತಿದ್ದ ಕುಖ್ಯಾತ ಕ್ರಿಮಿನಲ್‌ವೊಬ್ಬ ಉತ್ತರ ಪ್ರದೇಶದಲ್ಲಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಈತನ ತಲೆಗೆ 50000 ರೂ. ಬಹುಮಾನ ಘೋಷಿಸಲಾಗಿತ್ತು. ಇಟ್ಟಿಗೆ ಗೂಡೊಂದರ ಬಳಿ ಡಕಾಯಿತರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿದರು.ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಎನ್‌ಕೌಂಟರ್‌ನಲ್ಲಿ ಕ್ರಿಮಿನಲ್ ಸಮಯ್‌ದೀನ್ (35) ಮೃತಪಟ್ಟಿದ್ದಾನೆ. ಆದರೆ ಆತನ 5 ಮಂದಿ ಸಹಚರರು ತಪ್ಪಿಸಿಕೊಂಡರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

