Breaking News

ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ.. ವೃದ್ಧ ಬಲಿ

ಲಾರಿ, ಬಸ್, ಆಟೋ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಓರ್ವ ವೃದ್ದ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಭಾಗ್ಯನಗರ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ಚಿಲುವೆಂದುಲ ಗ್ರಾಮದ 68 ವರ್ಷದ ವೃದ್ದ ಮೃತ ದುರ್ದೈವಿಯಾಗಿದ್ದಾರೆ.ಸುಂಕುಲಮ್ಮ ದೇಗುಲದಿಂದ ಬರುತ್ತಿದ್ದ ಆಟೋ ತಿರುವು ಪಡೆದುಕೊಳ್ಳುವ ವೇಳೆ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಡಿಕ್ಕಿಯ ರಭಸಕ್ಕೆ ಪಲ್ಟಿಯಾದ ಆಟೋ ಬಸ್​​ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ವೃದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 10 ಜನರಿಗೆ ಘಟನೆಯಲ್ಲಿ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Share News

About BigTv News

Check Also

ವಿಜಯಪುರದಲ್ಲಿ ಹಾಡಹಗಲೇ ಫೈರಿಂಗ್ : ನಡು ರಸ್ತೆಯಲ್ಲೇ ಗುಂಡಿನ ದಾಳಿ ನಡೆಸಿ, ವ್ಯಕ್ತಿಯ ಹತ್ಯೆ!

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಟಕ್ಕೆ ಗ್ರಾಮದ ಯಾಸೀನ್ ಜುಬೇರ್ (ಮೃತ) ಸ್ಕೂಟಿಯಲ್ಲಿ …

Leave a Reply

Your email address will not be published. Required fields are marked *