Breaking News

ತೆಂಗಿನ ಮರದಿಂದ ಬಿದ್ದು ಕೃಷಿಕ ಸಾವು

ಸಿದ್ದಾಪುರ: ತೆಂಗಿನ ಮರವೇರಿ ಕಾಯಿ ಕೊಯ್ಯುತ್ತಿದ್ದ ವೃದ್ಧ ಕೃಷಿಕರೊಬ್ಬರು ಮರದಿಂದ ಬಿದ್ದು ಮೃತಪಟ್ಟಿದ್ದಾರೆ.ಸಿದ್ದಾಪುರ ಗ್ರಾಮದ ಮೇಲ್ಕಡ್ರಿ ರವೀಂದ್ರನಾಥ ಶೆಟ್ಟಿ (70) ಮೃತಪಟ್ಟವರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರು ಡಿ. 9ರಂದು ತಮ್ಮ ಮನೆಯ ತೆಂಗಿನಮರದಿಂದ ತೆಂಗಿನ ಕಾಯಿ ಕೊಯ್ಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡರು.ತತ್‌ಕ್ಷಣ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಪುತ್ರಿ ಪುಷ್ಪಲತಾ ಶೆಟ್ಟಿ (35) ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *