ನವದೆಹಲಿ: ಬೆಂಗಳೂರು ಸೇರಿ ದೇಶದ ವಿವಿಧ ನಗರಗಳ ಪೊಲೀಸರಿಗೆ ಬೆದರಿಕೆ ಇಮೇಲ್‌ಗಳನ್ನು ಕಳಿಸುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಭಯ್ ಎಂದು ಗುರುತಿಸಲಾಗಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವುದಾಗಿ ಸುಳ್ಳು ಹೇಳಿ ದೆಹಲಿ, ಬೆಂಗಳೂರು, ರಾಜಸ್ಥಾನದ ಹಲವು ಜಿಲ್ಲೆಗಳ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅಭಯ್ ಸಂದೇಶಗಳನ್ನು ಕಳುಹಿಸುತ್ತಿದ್ದ.ಅಲ್ಲದೆ, ತನಿಖಾಧಿಕಾರಿಗಳನ್ನು ದಾರಿತಪ್ಪಿಸಲು ಉದ್ದೇಶಪೂರ್ವಕವಾಗಿ ಮತ್ತೋರ್ವ ವ್ಯಕ್ತಿಯ ಮೊಬೈಲ್ ಸಂಖ್ಯೆಯನ್ನು ಇಮೇಲ್‌ನಲ್ಲಿ ಉಲ್ಲೇಖಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

