ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಾತಗುಣಿ ಸಮೀಪದ ತಿಮ್ಮರಾಯಪ್ಪ ಲೇಔಟ್‌ನ ಮನೆಯಲ್ಲಿ ನಡೆದಿದ್ದ ಸುಮಾರು ₹13 ಲಕ್ಷ ಮೌಲ್ಯದ 121 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸದರಿ ಮನೆಯಲ್ಲಿ ಬಾಡಿಗೆಗೆ ಇದ್ದ ಮಹಿಳೆ ಕುಸುಮ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.ಕುಸುಮ ಮೇಲೆ ಅನುಮಾನ ವ್ಯಕ್ತಪಡಿಸಿದ್ದ ಭಾಗ್ಯ ಅವರು ಠಾಣೆಗೆ ದೂರು ಕೊಟ್ಟಿದ್ದರು. ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ ಕುಸುಮ ಅವರನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿದಾಗ ಚಿನ್ನಾಭರಣ ಕದ್ದಿರುವುದಾಗಿ ಒಪ್ಪಿಕೊಂಡರು. ಬಳಿಕ ಅವರ ಮನೆಯಲ್ಲಿ ಬಚ್ಚಿಟ್ಟಿದ್ದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

