Breaking News

ಮದ್ದೂರು | ಹೆಣ್ಣು ಸಿಕ್ಕಿಲ್ಲ; ಮಠ ಮಾಡಿಕೊಡಿ: ಗ್ರಾಮಸಭೆಯಲ್ಲಿ ಯುವಕರ ಅಹವಾಲು

ಮದುವೆಗೆ ಹೆಣ್ಣು ಸಿಗುತ್ತಿಲ್ಲ. ಮಠ ನಿರ್ಮಿಸಿಕೊಡಿ’ ಎಂದು ತಾಲ್ಲೂಕಿನ ಕೊಪ್ಪ ಹೋಬಳಿಯ ಮರಳಿಗ ಗ್ರಾಮದ 20ಕ್ಕೂ ಹೆಚ್ಚು ಯುವಕರು ಗ್ರಾಮ ಸಭೆಯಲ್ಲಿ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.ಗ್ರಾಮ ಪಂಚಾಯಿತಿ ಆವರಣದಲ್ಲಿ ಯುವಕ ಪ್ರಸನ್ನ ನೇತೃತ್ವದಲ್ಲಿ ಪಂಚಾಯಿತಿ ಅಧ್ಯಕ್ಷೆ ಸುನಿತಾ ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿ, ನೋವು ಹೇಳಿಕೊಂಡರು.’ರೈತ ಕುಟುಂಬದ ನಮಗೆ 35-40 ವರ್ಷವಾಗಿದ್ದರೂ ಮದುವೆಗೆ ಹೆಣ್ಣು ಸಿಗುತ್ತಿಲ್ಲ. ಹತಾಶೆಯಾಗಿದೆ. ಪೋಷಕರೂ ಪರಿತಪಿಸುತ್ತಿದ್ದಾರೆ’ ಎಂದು ಅಲವತ್ತುಕೊಂಡರು. ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಸಲು ಬಂದಿದ್ದ ಗ್ರಾಮಸ್ಥರು ಹಾಗು ಅಹವಾಲು ಸ್ವೀಕರಿಸುತ್ತಿದ್ದ ಅಧಿಕಾರಿಗಳು ಯುವಕರು ‘ದುಮ್ಮಾನ’ ಕೇಳಿ ಕೆಲ ಹೊತ್ತು ಮೌನವಾದರು. ‘ಅರ್ಜಿಯನ್ನು ಪರಿಶೀಲಿಸಲಾಗುವುದು’ ಎಂದು ಅಧ್ಯಕ್ಷೆ ಪ್ರತಿಕ್ರಿಯಿಸಿದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *