ಮಕ್ಕಳನ್ನು ಲೈಂಗಿಕವಾಗಿ ಶೋಷಣೆ ಮಾಡುವ ಚಿತ್ರಗಳು, ವಿಡಿಯೊಗಳ ಅಪ್ಲೋಡ್, ಹಂಚಿಕೆ ಹಾಗೂ ವೀಕ್ಷಿಸುವುದು ಸಿಎಸ್ಎಎಂ ಸೈಬರ್ ಕಾಯ್ದೆ ಪ್ರಕಾರ ಕಾನೂನು ಬಾಹಿರವಾಗಿದೆ. ಇದನ್ನು ತಡೆಯಲು ತಂತ್ರಜ್ಞಾನ ಕಂಪನಿಗಳು ಮತ್ತು ಕಾನೂನು ಜಾರಿ ಸಂಸ್ಥೆಗಳು ನಿರಂತರವಾಗಿ ಶ್ರಮಿಸುತ್ತಿವೆ. ಸೈಬರ್ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಜಿಲ್ಲೆಯ ಪ್ರತಿಷ್ಠಿತ ಕುಟುಂಬದ ಈ ಯುವಕ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.ಪೊಲೀಸರು ವಿಚಾರಣೆ ನಡೆಸಿ ಖಾತರಿ ಪಡಿಸಿಕೊಂಡು ಆತನ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.ಸೈಬರ್ ಕ್ರೈಂ ಕಾಯ್ದೆಯಡಿ 9 ಪ್ರಕರಣಗಳು ಸೇರಿ ಒಟ್ಟು 32 ಪ್ರಕರಣಗಳು ದಾಖಲಾಗಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

