ಪ್ರೇಮಿಗಳ ವಿಚಾರದಲ್ಲಿ ನಡೆದ ಜಗಳ ಇಬ್ಬರ ಭೀಕರ ಕೊಲೆಯಲ್ಲಿ ಅಂತ್ಯವಾದ ದುರಂತ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜೈ ಭೀಮ್ ನಗರದಲ್ಲಿ ನಡೆದಿದೆ. ಮಂಜುನಾಥ್ (64) ಮತ್ತು ಕಿರಣ್ (26) ಮೃತಪಟ್ಟ ದುರ್ದೈವಿಗಳು.ಯುವತಿ ಸೃಷ್ಟಿಯ ಸಹೋದರ ಹಾಗೂ ಆತನ ಸ್ನೇಹಿತರಾದ ಶಶಿ, ಸಂಡು, ಕೆಂಚ, ಸುರೇಶ್ ಸೇರಿದಂತೆ ಇತರರು ಸೇರಿ ತಕರಾರು ತೆಗೆದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಅದು ಮಾರಾಮಾರಿಯಾಗಿ ಪರಿವರ್ತನೆಯಾಗಿದೆ.ಭದ್ರಾವತಿಯ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ಕೊಲೆಗೆ ಕಾರಣರಾದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಕುರಿತು ಪೊಲೀಸರ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

