Breaking News

ಬೆಳಗಾವಿ ಅಧಿವೇಶನಕ್ಕೆ ಬಿಡುವು: ಇಂದು ಡಿಕೆ ಶಿವಕುಮಾರ್, ನಾಳೆ ಸಿದ್ದರಾಮಯ್ಯ ದೆಹಲಿಗೆ!

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಡಿಸೆಂಬರ್ 8ರ ಸೋಮವಾರದಿಂದ 19ರ ತನಕ ಚಳಿಗಾಲದ ಅಧಿವೇಶನ ನಡೆಯಲಿದೆ. ಆದರೆ ಶನಿವಾರ ಮತ್ತು ಭಾನುವಾರದ ಕಾರಣ ಇಂದು, ನಾಳೆ ಅಧಿವೇಶನ ಇರುವುದಿಲ್ಲ.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ.ವೋಟ್ ಚೋರಿ ವಿರುದ್ದ ಕರ್ನಾಟಕ ಕಾಂಗ್ರೆಸ್ ಸಹಿ ಸಂಗ್ರಹ ಅಭಿಯಾನ ನಡೆಸಿತ್ತು. 1.12 ಕೋಟಿ ಜನರು ಸಹಿ ಹಾಕಿದ್ದರು. ದೆಹಲಿಯಲ್ಲಿ ಭಾನುವಾರ ಈ ವೋಟ್ ಚೋರಿ ಕುರಿತು ರಾಷ್ಟ್ರಮಟ್ಟದ ಹೋರಾಟ ನಡೆಸಲಾಗುತ್ತದೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *