ಗುಜರಾತ್ ನ ವಲ್ಸಾಡ್ ಪಟ್ಟಣದಲ್ಲಿ ಶುಕ್ರವಾರ ಬೆಳಗ್ಗೆ ನಿರ್ಮಾಣ ಹಂತದ ಸೇತುವೆಯೊಂದು ಕನಿಷ್ಠ ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.ಔರಂಗಾ ನದಿಗೆ ನಿರ್ಮಿಸಲಾಗುತ್ತಿದ್ದ ಈ ಸೇತುವೆಯ ಕಾಮಗಾರಿಯನ್ನು ರಾಜ್ಯ ರಸ್ತೆ ಹಾಗೂ ಕಟ್ಟಡ ನಿರ್ಮಾಣ ಇಲಾಖೆ ವಹಿಸಿತ್ತು.ಸೇತುವೆಯ ಸ್ತಂಭಗಳ ನಿರ್ಮಾಣ ಪೂರ್ಣಗೊಂಡಿದ್ದು, ಕಾಮಗಾರಿ ಕೆಲಸಕ್ಕಾಗಿ ಸ್ಥಾಪಿಲಾಗಿದ್ದ ಅಟ್ಟಳಿಗೆಗಳನ್ನು ತೆರವುಗೊಳಿಸಿದಿದ್ದಾಗ, ಅವು ಕುಸಿದಿವೆ. ಇದರಿಂದಾಗಿ ಸೇತುವೆಯ ಎರಡು ಸ್ತಂಭಗಳ ನಡುವಿನ ಪ್ರದೇಶಕ್ಕೆ ಹಾನಿಯಾಗಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ವಲ್ಸಾಡ್ ಜಿಲ್ಲಾಧಿಕಾರಿ ಭವ್ಯ ವರ್ಮಾ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

