Breaking News

ಖಾಕಿ ತೊಟ್ಟ ಭೂಗಳ್ಳ! 25 ಕೋಟಿ ಮೌಲ್ಯದ ಭೂಮಿ ಲಪಟಾಯಿಸಿದ ಹೆಡ್ ಕಾನ್ಸ್‌ಟೇಬಲ್

ನೆಲಮಂಗಲ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸ್ಟೇಬಲ್ ಗಿರಿಜೇಶ್ ವಿರುದ್ಧ ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸುಮಾರು 25 ಕೋಟಿ ರೂ. ಮೌಲ್ಯದ ಭೂಮಿಯನ್ನು ಅಕ್ರಮವಾಗಿ ಲಪಟಾಯಿಸಿದ ಆರೋಪ ಗಿರಿಜೇಶ್ ಮತ್ತು ಆತನ ಸಹಚರರ ಮೇಲಿದೆ. ಗಿರಿಜೇಶ್ ಜೊತೆಗೆ ಮನೋಜ್, ರೋಹಿಣಿ ಸೇರಿದಂತೆ ಇನ್ನೂ ಹಲವರ ವಿರುದ್ಧ ಭೂಗಳ್ಳತನ ಪ್ರಕರಣ ದಾಖಲಿಸಲಾಗಿದೆ.ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗಿರಿಜೇಶ್‌ನನ್ನು ಅಮಾನತು ಮಾಡಲಾಗಿತ್ತು. ಮನೆಯಲ್ಲಿದ್ದರೂ ಬುದ್ಧಿ ಕಲಿಯದ ಈ ಆರೋಪಿ, ಭೂ ಮಾಲೀಕರಿಗೆ ತಿಳಿಯದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನನ್ನು ತನ್ನ ಹಾಗೂ ಇತರ ಸಹಚರರ ಹೆಸರಿಗೆ ರಿಜಿಸ್ಟರ್ ಮಾಡಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *