ಓಕಳೀಪುರಂ ರೈಲ್ವೇ ಪ್ಯಾರಲೆಲ್ ರಸ್ತೆ ಬಳಿ ಸಂಭವಿಸಿದ ಭೀಕರ ಟ್ರಕ್ ಅಪಘಾತದಲ್ಲಿ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶೇಷಾದ್ರಿಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.ವೇಗದಿಂದ ಬಂದ ಟ್ರಕ್ ಒಂದು ರಸ್ತೆ ದಾಟುತ್ತಿದ್ದ ಲಲಿತಮ್ಮ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಲಿತಮ್ಮ ಅವರು ಕೆಳಗೆ ಬಿದ್ದಿದ್ದು, ತಕ್ಷಣವೇ ಟ್ರಕ್‌ನ ಚಕ್ರ ಅವರ ತಲೆಯ ಮೇಲೆ ಹರಿದು ಹೋಗಿದೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಭೀಕರವಾಗಿ ಮೃತಪಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

