Breaking News

ಬೆಂಗಳೂರು: ವಿದ್ಯುತ್ ಕಂಬದ ಮೇಲೆ ಕುಳಿತಿದ್ದ ವಿದೇಶಿ ತಳಿಯ ಗಿಳಿಯನ್ನು ರಕ್ಷಿಸಲು ಹೋದ ಯುವಕ ಸಾವು

ವಿದ್ಯುತ್ ಕಂಬದ ಮೇಲೆ ಕುಳಿತಿದ್ದ ವಿದೇಶಿ ಗಿಳಿಯನ್ನು ರಕ್ಷಿಸಲು ಹೋಗಿ ಯುವಕನೋರ್ವ ಸಾವನ್ನಪ್ಪಿರುವಂತಹ ಘಟನೆ ಇಲ್ಲಿನ ಗಿರಿನಗರದ ಖಾಸಗಿ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ. ಅರುಣ್ ಕುಮಾರ್(32) ಮೃತ ಯುವಕ.ಸುಮಾರು 2 ಲಕ್ಷ ರೂ. ಬೆಲೆ ಬಾಳುವ ವಿದೇಶಿ ಗಿಳಿಯೊಂದು ಖಾಸಗಿ ಅಪಾರ್ಟ್‍ಮೆಂಟ್ ಒಳಭಾಗದಲ್ಲಿರುವ 65 ಸಾವಿರ ಕೆವಿ ಸಾಮರ್ಥ್ಯದ ವಿದ್ಯುತ್ ಕಂಬದ ಮೇಲೆ ಕುಳಿತಿತ್ತು. ಇದನ್ನು ನೋಡಿದ ಅರುಣ್ ಕುಮಾರ್ ಗಿಳಿ ರಕ್ಷಣೆಗೆ ಮುಂದಾಗಿದ್ದಾರೆ. ಅಪಾರ್ಟ್‍ಮೆಂಟ್ ಕಾಪೌಂಡ್ ಮೇಲೆ ನಿಂತು ಕಬ್ಬಿಣದ ಸಲಾಕೆಗೆ ಕಟ್ಟಿಗೆ ಸೇರಿಸಿ ಓಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *