Breaking News

ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಇಬ್ಬರು ಮಹಿಳಾ ಕಾರ್ಮಿಕರು ಬಲಿ.!

ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ನಿನ್ನೆ ಸಂಜೆ ಅಪಘಾತವಾಗಿದೆ. ನೈಸ್ ರಸ್ತೆ ಬಳಿ ಹುಲ್ಲು ತೆರವು ಮಾಡುತ್ತಿದ್ದ ಮಹಿಳಾ ಕಾರ್ಮಿಕರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.ರಂಗಮ್ಮ ಮತ್ತು ಚೌಡಮ್ಮಗೆ ವಾಹ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕ ಪರಾರಿಯಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಘಟನೆ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *