Breaking News

ರಾಜ್ಯದಲ್ಲಿ ಮತ್ತೊಂದು ‘ಡಬಲ್ ಮರ್ಡರ್’ : ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ ಶಿವಮೊಗ್ಗದಲ್ಲಿ ಇಬ್ಬರ ಬರ್ಬರ ಹತ್ಯೆ.!

ರಾಜ್ಯದಲ್ಲಿ ಮತ್ತೊಂದು ಡಬಲ್ ಮರ್ಡರ್ ನಡೆದಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜೈ ಭೀಮ್ ಬಡಾವಣೆಯಲ್ಲಿ ಪ್ರೇಮಿಗಳಿಗೆ ಸಹಕರಿಸಿದ ಇಬ್ಬರನ್ನ ಯುವತಿಯ ಸಹೋದರ ಹಾಗೂ ಹಾಗೂ ಆತನ ಸ್ನೇಹಿತರು ಹತ್ಯೆ ಮಾಡಿದ್ದಾರೆ.ಹತ್ಯೆಯಾದ ಯುವಕರನ್ನ ಕಿರಣ್ (25) ಮಂಜುನಾಥ್ (45) ಎಂದು ಗುರುತಿಸಲಾಗಿದೆ. ಮನೆ ಬಿಟ್ಟು ಬಂದ ಪ್ರೇಮಿಗಳು ಶುಕ್ರವಾರ ಸಂಜೆ ಹಳೆ ಪೊಲೀಸ್ ಠಾಣೆಗೆ ಬಂದಿದ್ದರು. ಈ ವೇಳೆ ಹುಡುಗನ ಸ್ನೇಹಿತರ ಮೇಲೆ ಯುವತಿಯ ಸಹೋದರ ಹಾಗೂ ಆತನ ಸ್ನೇಹಿತರು ದಾಳಿ ಮಾಡಿದ್ದಾರೆ. ಚಾಕುವಿನಿಂದ ಇರಿದು ಇಬ್ಬರನ್ನ ಹತ್ಯೆ ಮಾಡಿದ್ದಾರೆ. ಭದ್ರಾವತಿ ಹಳೆನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್, ವೆಂಕಟೇಶ್, ಸುರೇಶ್, ಮಂಜುನಾಥ್, ಭರತ್ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *