ಬೆಳ್ತಂಗಡಿ: ಮರೋಡಿ ಗ್ರಾಮದ ಅಟ್ಲಕಜೆಯಲ್ಲಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಒಲೆ ಮೇಲೆ ಬಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಡಿ. 11ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಅಟ್ಲಕಜೆ ನಿವಾಸಿ ಸುಬ್ಬಿ (65) ಮೃತಪಟ್ಟವರು.ಅವರು ಸುಮಾರು 2 ತಿಂಗಳ ಹಿಂದೆ ಪಾರ್ಶ್ವವಾಯು ಖಾಯಿಲೆಗೆ ತುತ್ತಾಗಿ ಗುಣಮುಖವಾಗಿದ್ದು, ಡಿ. 2ರಂದು ತನ್ನ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಒಲೆ ಮೇಲೆ ಬಿದ್ದು ಸುಟ್ಟು ಗಂಭೀರ ಗಾಯಗೊಂಡಿದ್ದರು. ಬಳಿಕ ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಡಿ. 11 ರಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಕುರಿತು ಅವರ ಪುತ್ರ ಥೋಮಸ್ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

