Breaking News

ಬೆಂಗಳೂರು | ರಸ್ತೆ ಅಪಘಾತ: ಯುವಕ ಸಾವು

ದಾಬಸ್ ಪೇಟೆ: ಮಧುಗಿರಿ ರಸ್ತೆಯ ನರಸೀಪುರ ತೋಪಿನ ಬಳಿ ಸಾರಿಗೆ ಸಂಸ್ಥೆ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಯುವಕ ಮೃತಪಟ್ಟಿದ್ದಾರೆ.ದೀಕ್ಷಿತ್ ಶೆಟ್ಟಿ (21) ಮೃತ ಯುವಕ. ಬೈಂದೂರಿನ ದೀಕ್ಷಿತ್, ಮತ್ತಿಕೆರೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಸಿ.ಎ ವ್ಯಾಸಂಗ ಮಾಡುತ್ತಿದ್ದರು.ಸ್ನೇಹಿತರೊಂದಿಗೆ ದೇವರಾಯನ ದುರ್ಗ ಬೆಟ್ಟಕ್ಕೆ ಬೈಕ್‌ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಮೃತದೇಹ ನೀಡಲಾಯಿತು. ದಾಬಸ್‌ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಚಾಲಕನನ್ನು ಬಂಧಿಸಿ, ಬಸ್‌ ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *