Breaking News

ಆನೇಕಲ್: ಕುಡಿದ ಮತ್ತಿನಲ್ಲಿ ಖಾಸಗಿ ಬಸ್ ಕದ್ದರು!

ಆನೇಕಲ್‌ನ ಥಳಿ ರಸ್ತೆಯಲ್ಲಿ ಬಸ್ ಏರಿದ ಮದ್ಯದ ಮತ್ತಿನಲ್ಲಿದ್ದ ನಾಲ್ವರು ಯುವಕರು ಬಸ್‌ ಓಡಿಸಿಕೊಂಡು ಹೋಗಿದ್ದಾರೆ. ನಿಯಂತ್ರಣ ತಪ್ಪಿದ ಬಸ್‌ ರಸ್ತೆಯಲ್ಲಿ ಅಡ್ಡಾದಿಡ್ಡಿ ಚಲಿಸಿ ರಸ್ತೆ ಬದಿಯ ಎರಡು ವಿದ್ಯುತ್‌ ಕಂಬಗಳಿಗೆ ಗುದ್ದಿದೆ. ಅದಕ್ಕೂ ಮುನ್ನ ಥಳಿ ರಸ್ತೆಯಲ್ಲಿ ನಡೆದು ಹೊರಟಿದ್ದ ಪಾದಚಾರಿಗೆ ಗುದ್ದಿ ಆತನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಡ್ಡಾದಿಡ್ಡಿ ಚಲಿಸುತ್ತಿದ್ದ ಬಸ್‌ ಕಂಡ ಸಾರ್ವಜನಿಕರು ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ಬಸ್‌ನಲ್ಲಿದ್ದ ಮೂವರು ಪರಾರಿಯಾಗಿದ್ದಾರೆ. ಚಾಲನೆ ಮಡುತ್ತಿದ್ದ ಗುನ್ನಿ ಪಾಷಾ (26) ಎಂಬಾತನನ್ನು ಹಿಡಿದ ಸಾರ್ವಜನಿಕರು ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ತಡರಾತ್ರಿಯಾದ ಕಾರಣ ರಸ್ತೆಯಲ್ಲಿ ವಾಹನ ಹಾಗೂ ಜನಸಂಚಾರ ಕಡಿಮೆ ಇತ್ತು. ಹೀಗಾಗಿ ಭಾರಿ ಅನಾಹುತ ತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಖಾಸಗಿ ಬಸ್‌ ಮಾಲೀಕರಾಗಲಿ ಇಲ್ಲವೇ ವಿದ್ಯುತ್‌ ಕಂಬ ಉರುಳಿ ಬಿದ್ದ ಕಾರಣ ಬೆಸ್ಕಾಂ ಅಧಿಕಾರಿಗಳು ದೂರು ನೀಡಿಲ್ಲ ಎಂದು ತಿಳಿದು ಬಂದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *