Breaking News

ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ `ಪ್ರವಾಸಿ ಬಸ್’ : ಮಡಿಕೇರಿಯಲ್ಲಿ ತಪ್ಪಿದ ಭಾರೀ ದುರಂತ.!

ಮಡಿಕೇರಿ : ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ. ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದೆ. ಬಸ್ನದಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು.ಅಕಸ್ಮಾತ್ ಪ್ರವಾಸಿಗರಿದ್ದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಕೇರಳ ನೋಂದಣಿಯ ಖಾಸಗಿ ಬಸ್ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *