Breaking News

ರಾಮನಗರ | ಮಾದಕ ವಸ್ತು ಮಾರಾಟ: ಇಬ್ಬರ ಬಂಧನ

ನಗರದ ಹೊರವಲಯದ‌ ರಂಗರಾಯನದೊಡ್ಡಿ ಕೆರೆ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಐಜೂರು ಠಾಣೆ ಪೊಲೀಸರು, ಆರೋಪಿಗಳಿಂದ 2.5 ಗ್ರಾಂ ತೂಕದ ಎಂಡಿಎಂಎ ಮಾದಕವಸ್ತು ಹಾಗೂ ₹2 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ನಗರದ ತೌಸಿಫ್ ಮಹಮ್ಮದ್(26) ಮತ್ತು ನವಾಜ್ ಪಾಷಾ(25) ಬಂಧಿತರು.ಆರೋಪಿಗಳು ಕೆರೆ ರಸ್ತೆಯಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿರುವ ಕುರಿತು ಸಿಕ್ಕ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಮಾಲು ಸಮೇತ ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದರು. ಆರೋಪಿಗಳು ಬೆಂಗಳೂರಿನ ಸಿಟಿ ಮಾರ್ಕೆಟ್‌ನಲ್ಲಿರುವ ಪರಿಚಿತರೊಬ್ಬರ ಅಂಗಡಿಯೊಂದರಲ್ಲಿ ತಂದು ಮಾರಾಟ ಮಾಡುತ್ತಿದ್ದರು. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *