ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಮಡಂತ್ಯಾರು ಸಮೀಪ ಡಿ. 14ರಂದು ಸಂಭವಿಸಿದೆ.ಮೆಸ್ಕಾಂ ವೇಣೂರು ಶಾಖೆಯಲ್ಲಿ ಉದ್ಯೋಗಿ ನೋಯೆಲ್ ಜೋಸೆಫ್ ಪಿಂಟೋ (38) ಮೃತಪಟ್ಟವರು.ತಮ್ಮ ಮನೆಯ ಕೆಲಸದವರಿಗೆ ತಿಂಡಿ ತರಲೆಂದು ಮಡಂತ್ಯಾರಿಗೆ ಬರುತ್ತಿದ್ದ ವೇಳೆ ಬಸ್ಸೊಂದು ಆಟೋ ರಿಕ್ಷಾವನ್ನು ಹಿಂದಿಕ್ಕುವ ಭರದಲ್ಲಿ ಬೈಕ್‌ಗೆ ಢಿಕ್ಕಿ ಹೊಡೆಯಿತು. ನೋಯೆಲ್ ಅವರ ಎದೆಗೆ ಬಲವಾದ ಗಾಯವಾಗಿ ಮೃತಪಟ್ಟರು. ಮೃತರು ತಾಯಿ, ಇಬ್ಬರು ಸಹೋದರರು ಮತ್ತು ಸಹೋದರಿಯನ್ನು ಅಗಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

