Breaking News

ಮಂಜು ಕವಿದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಶಿಕ್ಷಕ ದಂಪತಿ ಸಾವು

ಮಂಜು ಕವಿದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಶಿಕ್ಷಕ ದಂಪತಿ ಸಾವುಜಸ್ ಕರಣ್ ಸಿಂಗ್ ಹಾಗೂ ಪತ್ನಿ ಕಮಲ್ ಜಿತ್ ಕೌರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸರ್ಕಾರಿ ಶಾಲೆ ಶಿಕ್ಷಕರಾಗಿದ್ದ ಇಬ್ಬರೂ ಪಂಜಾಬ್ ನ ಜಿಲ್ಲಾ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಂಗತ್ ಪುರ ಗ್ರಾಮದಿಂದ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ಹೋಗುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ. ದಟ್ಟ ಮಂಜಿನಿಂದಾಗಿ ರಸ್ತೆ ಗೋಚರಿಸುತ್ತಿರಲಿಲ್ಲ. ಮುಂದಿನ ರಸ್ತೆ ಕಾಣದೇ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಕಾಲುವೆಗೆ ಬಿದ್ದಿದೆ. ದಂಪತಿ ಕಾರಿನ ಸಮೇತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *