Breaking News

ಮದುವೆ ದಿನವೇ ಯುವತಿ ನಾಪತ್ತೆ!

ಬಂಟ್ವಾಳ: ಬಿ.ಸಿ.ರೋಡಿನ ಪಲ್ಲಮಜಲಿನ ಯುವತಿಯೋರ್ವಳು ತನ್ನ ಮದುವೆಯ ದಿನವೇ ಮುಂಜಾನೆ ನಾಪತ್ತೆಯಾಗಿದ್ದಾಳೆ.ಪಲ್ಲಮಜಲು ನಿವಾಸಿ ಅಶ್ಪಿಯ (21) ನಾಪತ್ತೆಯಾದವರು. ಆಕೆ ವಿವಾಹ ಮಂಗಳೂರಿನ ಯುವಕನೊಂದಿಗೆ ಡಿ. 14ರಂದು ತೊಕ್ಕೊಟ್ಟಿನ ಸಭಾಂಗಣದಲ್ಲಿ ನಡೆಯಬೇಕಿತ್ತು. ಮುಂಜಾನೆ 3.30ರ ಸುಮಾರಿಗೆ ಆಕೆ ಮಲಗಿರುವುದನ್ನು ಮನೆಮಂದಿ ಕಂಡಿದ್ದರು.ಮತ್ತೆ 4.30ರ ಸುಮಾರಿಗೆ ನೋಡಿದಾಗ ನಾಪತ್ತೆಯಾಗಿದ್ದರು. ಎಲ್ಲೆಡೆ ಹುಡುಕಿದರೂ ಪತ್ತೆಯಾಗಿಲ್ಲ ಎಂದು ಸಹೋದರ ಅರ್ಶದ್ ಪೊಲೀಸರಿಗೆ ದೂರು ನೀಡಿದ್ದಾರೆ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಗಾಗಿ ಶೋಧ ನಡೆಸುತ್ತಿದ್ದಾರೆ.
ಆಕೆಯ ಜತೆ ಮದುವೆ ನಿಗದಿಯಾಗಿದ್ದ ವರನ ಮನೆಯವರು ಕೂಡ ಮಂಗಳೂರು ಬಂದರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ವರನ ಕಡೆಯಿಂದ ಆಕೆಗೆ ನೀಡಿದ್ದ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *