Breaking News

ಹೊನ್ನುಡಿಕೆ ಬಳಿ ಬೊಲೆರೊ ಡಿಕ್ಕಿ: ಬೈಕ್‌ ಸವಾರ ಸಾವು

ತುಮಕೂರು: ತಾಲ್ಲೂಕಿನ ಹೊನ್ನುಡಿಕೆ ಬಳಿ ಸೋಮವಾರ ಬೈಕ್‌ಗೆ ಬೊಲೆರೊ ವಾಹನ ಡಿಕ್ಕಿಯಾಗಿ ಬೈಕ್‌ ಸವಾರ ಕಿರಣ್‌ (20) ಮೃತಪಟ್ಟಿದ್ದಾರೆ.ಕಿರಣ್ ಮಾಗಡಿ ತಾಲ್ಲೂಕು ಕುದೂರು ಬಳಿಯ ಶ್ರೀಗಿರಿಪುರದ ನಿವಾಸಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸ್ವಗ್ರಾಮದಿಂದ ಹೊನ್ನುಡಿಕೆ ಮಾರ್ಗವಾಗಿ ನಗರದ ಕಡೆಗೆ ಬರುವಾಗ ನಗರದಿಂದ ತೆರಳುತ್ತಿದ್ದ ಬೊಲೆರೊ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *