ಹುಬ್ಬಳ್ಳಿ ನಗರದಲ್ಲಿ ಮತ್ತೆ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳ್ಳರ ಹಾವಳಿ ಜನರಲ್ಲಿ ಆತಂಕ ಮೂಡಿಸಿದೆ. ಇಂಡಸ್ಟ್ರಿಯಲ್ ಏರಿಯಾದ ಶ್ರೇಯಾ ನಗರ 6ನೇ ಕ್ರಾಸ್ ಬಳಿ ಇರುವ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಮನೆ ಗೇಟ್ ಕಿಲಿ ಮುರಿದು ಕಳ್ಳನು ಒಳನುಗ್ಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೆಕ್ಕಿನಂತೆ ಮೌನವಾಗಿ ಬಂದ ಈ ಕಳ್ಳ, ಮನೆ ಸುತ್ತಲು ಓಡಾಡುತ್ತಾ ಒಳಗೆ ನುಗ್ಗಲು ಪ್ರಯತ್ನ ನಡೆಸಿದ್ದಾನೆ. ಬಳಿಕ ಕೈಗೆ ಸಿಕ್ಕ ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾನೆ. ಈ ಸಂಪೂರ್ಣ ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ಇದು ಗೋಕುಲ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

