Breaking News

ಜಾಗದ ವಿಷಯಕ್ಕೆ ಸಂಬಂಧಿಸಿ ಹಲ್ಲೆ, ಬೆದರಿಕೆ

ಮಲ್ಪೆ: ಜಾಗದ ವಿಷಯಕ್ಕೆ ಸಂಬಂಧಿಸಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಬೆಂಗಳೂರಿನಲ್ಲಿ ನೆಲೆಸಿರುವ ನವ್ಯಶ್ರೀ ದೂರು ನೀಡಿದ್ದು ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ಅವರು 15 ದಿನಗಳ ಹಿಂದೆ ಬೆಂಗಳೂರಿನಿಂದ ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್‌ ಬಳಿ ಇರುವ ಅಜ್ಜಿ ಉಮಾದೇವಿ ಅವರ ಮನೆಗೆ ಕುಟುಂಬ ಸಮೇತ ಬಂದಿದ್ದರು.ಡಿ. 12ರಂದು ರಾತ್ರಿ ದಿನೇಶ್‌ ಮೆಂಡನ್‌ ಎಂಬಾತ ಮನೆಯೊಳಗೆ ಪ್ರವೇಶಿಸಿ ಉಮಾದೇವಿ ಅವರ ಬಳಿ ಹಣ ಕೊಡುವಂತೆ ಜಗಳ ಮಾಡಿದ್ದಲ್ಲದೆ, ನಮ್ಮನ್ನೆಲ್ಲ ಮನೆ ಬಿಟ್ಟು ಹೋಗಿ ಎಂದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾನೆ. ಆರೋಪಿಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *