Breaking News

ಅಲೋಕ್‌ ಕಾರ್ಯಾಚರಣೆ ಬೆನ್ನಲ್ಲೇ ಬೆಚ್ಚಿಬಿದ್ದ ಖೈದಿಗಳು

ಬೆಂಗಳೂರು: ಕಾರಾಗೃಹಗಳಲ್ಲಿನ ಅಕ್ರಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ಕಾರಾಗೃಹ ಇಲಾಖೆ ಒಂದು ಹೆಜ್ಜೆ ಮುಂದೆ ಹೋಗಿದ್ದು, ಎಐ ತಂತ್ರಜ್ಞಾನ ಬಳಕೆಗೆ ಮುಂದಾಗಲು ಚಿಂತನೆ ನಡೆಸುತ್ತಿದೆ. ಕಾರಾಗೃಹಗಳ ಡಿಜಿಪಿ ಅಲೋಕ್ ಕುಮಾರ್ ಅವರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಜೈಲುಗಳಲ್ಲಿ ಮೊಬೈಲ್ ಫೋನ್ ಬಳಕೆ, ಮಾದಕ ವಸ್ತುಗಳ ಸಾಗಣೆ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳನ್ನು ತಡೆಯಲು ಎಐ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸಲಿದೆ ಎಂಬುದು ಡಿಜಿಪಿಗೆ ಮನವರಿಕೆಯಾಗಿದೆ. ಕಾರಾಗೃಹ ಸಿಬ್ಬಂದಿಯ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪಗಳನ್ನು ಪತ್ತೆಹಚ್ಚಲು ಸಹ ಎಐ ತಂತ್ರಜ್ಞಾನ ಪರಿಣಾಮಕಾರಿಯಾಗಲಿದೆ ಎನ್ನಲಾಗಿದೆ. ಜೈಲುಗಳಿಗೆ ಗಾಂಜಾ, ಮೊಬೈಲ್ ಸೇರಿದಂತೆ ಅಕ್ರಮ ವಸ್ತುಗಳ ಸಾಗಾಣೆ ಜಾಲವನ್ನು ಸಂಪೂರ್ಣವಾಗಿ ಭೇದಿಸುವುದು ಡಿಜಿಪಿ ಅಲೋಕ್ ಕುಮಾರ್ ಅವರ ಪ್ರಮುಖ ಗುರಿಯಾಗಿದೆ. ಡಿಜಿಪಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅವರು ಅಧಿಕಾರಿಗಳ ಸಭೆ ನಡೆಸಿ, ಯಾವುದೇ ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆ ನಡೆಯಬಾರದು ಎಂದು ಖಡಕ್ ಸೂಚನೆ ನೀಡಿದ್ದರು. ಜೈಲಿನೊಳಗೆ ಮಾದಕ ವಸ್ತುಗಳು, ಮೊಬೈಲ್ ಫೋನ್ ಹಾಗೂ ಇನ್ನಿತರ ನಿಷೇಧಿತ ವಸ್ತುಗಳು ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದು, ಕರ್ತವ್ಯ ಲೋಪವೆಸಗುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕಾರಾಗೃಹಗಳಲ್ಲಿ ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಕೈದಿಗಳು ಹಾಗೂ ವಿಚಾರಣಾಧೀನ ಕೈದಿಗಳು ಡಿಜಿಪಿಯ ಈ ಕ್ರಮದಿಂದ ಬೆಚ್ಚಿಬಿದ್ದಿದ್ದಾರೆ ಎನ್ನಲಾಗಿದೆ. ಸೋಮವಾರ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಭೇಟಿ ನೀಡಿದ ಡಿಜಿಪಿ ಅಲೋಕ್ ಕುಮಾರ್ ಅವರು ಬ್ಯಾರಕ್‌ಗಳು ಹಾಗೂ ಆಸ್ಪತ್ರೆಯನ್ನು ಪರಿಶೀಲಿಸಿ, ಬಳಿಕ ಜೈಲು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *