Breaking News

ರೈತರೇ ಕಬ್ಬು ಕಟಾವು ವೇಳೆ ಎಚ್ಚರ : ಯಂತ್ರದಲ್ಲಿ `ತಲೆ ಸಿಲುಕಿ’ ಇಬ್ಬರು ಮಹಿಳೆಯರು ಸಾವು.!

ಬೆಳಗಾವಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಕಬ್ಬು ಕಟಾವು ಮಾಡುವ ಯಂತ್ರಕ್ಕೆ ಸಿಲುಕಿ ಇಬ್ಬರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆಬಾರವ್ವ ಕೋಬಡಿ (60) ಹಾಗೂ ಲಕ್ಷ್ಮೀಬಾಯಿ ರುದ್ರಗೌಡರ (65) ಎಂದು ತಿಳಿದುಬಂದಿದೆ.ಕಟಾವು ವೇಳೆ ಮುಂದೆ ನೋಡದೆ ಡ್ರೈವರ್ ವಾಹನ ಚಲಾಯಿಸಿದ್ದಾನೆ ಇಬ್ಬರೂ ಮಹಿಳೆಯರ ತಲೆ ಯಂತ್ರದಲ್ಲಿ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಕಬ್ಬಿಣ ಗದ್ದೆಗೆ ಕೂಲಿ ಕೆಲಸಕ್ಕೆ ಎಂದು ಇಬ್ಬರು ಮಹಿಳೆಯರು ಬಂದಿದ್ದರು. ಚಾಲಕನ ನಿರ್ಲಕ್ಷದಿಂದ ಕೂಲಿಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ತಳದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಇದೀಗ ಮುಗಿಲು ಮುಟ್ಟಿದೆ. ಘಟನೆ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *