ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬುಧವಾರ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಅರೆಸ್ಟ್ ಮಾಡಿದ್ದಾರೆ.ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ನಿನ್ನೆ ಶಿವಮೊಗ್ಗದಲ್ಲಿ ಮಂಜುನಾಥ್ ಗೌಡ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿದ್ದರು.ಅಲ್ಲದೇ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಅತಿಥಿಗೃಹದಲ್ಲಿ ವಿಚಾರಣೆ ನಡೆಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಮಂಜುನಾಥ್ ಗೌಡ ಅವರನ್ನು ಇಂದು ಅಧಿಕೃತವಾಗಿ ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ 1ನೇ ಸಿಸಿಹೆಚ್ ನ್ಯಾಯಾಲಯ, ಆರೋಪಿಯನ್ನು 14 ದಿನ ಇಡಿ ಕಸ್ಟಡಿಗೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

