ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನಕ್ಕೆ ಬಂದಿದ್ದ ನಗರದ ವ್ಯಕ್ತಿಯೊಬ್ಬರ ಜೇಬಿನಿಂದ ದುಷ್ಕರ್ಮಿಗಳು ₹36,000 ನಗದು ಕಳವು ಮಾಡಿರುವ ಘಟನೆ ತಡವಾಗಿ ಗೊತ್ತಾಗಿದೆ.ನಗರದ ಬಿಐಟಿ ಲೇಔಟ್ ನಿವಾಸಿಯೊಬ್ಬರು ಅಂತಿಮ ದರ್ಶನ ಪಡೆಯಲು ಎಂಸಿಸಿ ‘ಬಿ’ ಬ್ಲಾಕ್‌ನಲ್ಲಿರುವ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ನಿವಾಸದ ಬಳಿಗೆ ಬಂದಿದ್ದರು. ಈ ವೇಳೆ ಗೇಟ್ ಬಳಿ ಭಾರಿ ಸಂಖ್ಯೆಯ ಜನರು ಸೇರಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು, ವ್ಯಕ್ತಿಯ ಪ್ಯಾಂಟ್ ಜೇಬು ಕತ್ತರಿಸಿ ಅದರಲ್ಲಿದ್ದ ಹಣವನ್ನು ಎಗರಿಸಿ ಪರಾರಿಯಾಗಿದ್ದಾರೆ. ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

