Breaking News

ಶಾಲಾ ಬಸ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ

ಸಾಗರ: ತಾಲ್ಲೂಕಿನ ಇಡುವಾಣಿ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ನಗರದ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ವಾಹನದ ನಡುವೆ ಗುರುವಾರ ಮುಖಾಮುಖಿ ಡಿಕ್ಕಿಯಾಗಿದ್ದು ಎರಡೂ ಬಸ್‌ಗಳ ಚಾಲಕರು , ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ಸಾಗರದಿಂದ ಕಾರ್ಗಲ್ ಕಡೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಕಾರ್ಗಲ್‌ನಿಂದ ಸಾಗರಕ್ಕೆ ಬರುತ್ತಿದ್ದ ಶಾಲಾ ವಾಹನದ ನಡುವೆ ಈ ಅಪಘಾತ ಸಂಭವಿಸಿದೆ.ಶಾಲಾ ವಾಹನದ ಬಸ್ ಚಾಲಕ ಪ್ರವೀಣ್, ಸರ್ಕಾರಿ ಬಸ್ ಚಾಲಕ ಆರೀಫ್, ವಿದ್ಯಾರ್ಥಿ ಸಾತ್ವಿಕ್ ಅವರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *