Breaking News

ಕರ್ತವ್ಯಲೋಪ ಆರೋಪ: ವಿದ್ಯಾರ್ಥಿ ನಿಲಯ ಪಾಲಕಿ ಅಮಾನತು

ಹುಬ್ಬಳ್ಳಿ: ಕರ್ತವ್ಯಲೋಪ ಆರೋಪದ ಮೇಲೆ ಇಲ್ಲಿನ ರಾಜನಗರದ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯದ ನಿಲಯ ಪಾಲಕಿಯನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೊರಡಿಸಿದ್ದಾರೆ.ಶೋಭಾ ಚಾಕಲಬ್ಬಿ ಅಮಾನತುಗೊಂಡವರು. ವಿದ್ಯಾರ್ಥಿನಿಲಯದಲ್ಲಿನ ಅವ್ಯವಸ್ಥೆ ಬಗೆಗಿನ ವರದಿ ಆಧರಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಖುದ್ದು ಪರಿಶೀಲನೆ ನಡೆಸಿದ್ದಾರೆ.ಅವರ ವರದಿ ಆಧರಿಸಿ ಇಲಾಖಾ ವಿಚಾರಣೆ ಕಾಯ್ದಿರಿಸಿ, ಅಮಾನತಿನಲ್ಲಿ ಇರಿಸಲಾಗಿದೆ. ಮೇಲಧಿಕಾರಿಗಳ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಸೂಚಿಸಿದ್ದಾರೆ. ನಿಲಯದ ಕಾರ್ಯ ಪ್ರಭಾರವನ್ನು ಬೇರೆಯವರಿಗೆ ವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *