Breaking News

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಜೈಲು ಸಿಬ್ಬಂದಿಗಳಿಂದಲೇ ದಾಳಿ: ಮೊಬೈಲ್, ಸಿಮ್ ಕಾರ್ಡ್ ಗಳು ಪತ್ತೆ

ಶಿವಮೊಗ್ಗದ ಕೇಂದ್ರ ಕಾರಾಗೃಹದ ಮೇಲೆ ಜೈಲು ಸಿಬ್ಬಂದಿಗಳೇ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ನಿಷೇಧಿತ ವಸ್ತುಗಳು ಪತ್ತೆಯಾಗಿವೆ.ಕೆಲ ದಿನಗಳ ಹಿಂದೆ ಜೈಲಿನಲ್ಲಿ ಗಾಂಜಾ ಸೇರಿದಂತೆ ಹಲವಾರು ನಿಷೇಧಿತ ವಸ್ತುಗಳು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಕಾರಾಗೃಹ ಸಿಬ್ಬಂದಿಗಳೇ ದಿಢೀರ್ ಆಗಿ ಜೈಲಿನಲ್ಲಿ ದಾಳಿ ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ.ದಾಳಿ ವೇಳೆ ಮೂರು ಮೊಬೈಲ್ ಗಳು, ನಾಲ್ಕು ಸಿಮ್ ಕಾರ್ಡ್, ಮೂರು ಡೇಟಾ ಕೇಬಲ್, ಎರಡು ಇಯರ್ ಫೋನ್, ಒಂದು ಚಾರ್ಜರ್ ಸಿಕ್ಕಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜೈಲು ಕಾರಾಗೃಹ ಸಿಬ್ಬಂದಿಗಳ ಈ ಕಾರ್ಯಾಚರಣೆಗೆ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಶ್ಲಾಘಿಸಿದ್ದು, 10,000 ರೂಪಾಯಿ ಬಹುಮಾನ ಘೋಷಿಸಿದ್ದಾರೆ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *