ತಾಲ್ಲೂಕಿನ ಸಾಣಾಪುರ ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಕೇರಳದಿಂದ ಬಂದಿದ್ದ ಪ್ರವಾಸಿಗ ಮುಳುಗಿ ಶುಕ್ರವಾರ ಮೃತಪಟ್ಟಿದ್ದಾನೆ.ಪ್ರವಾಸಕ್ಕಾಗಿ ಬಂದಿದ್ದ ಶೈರಿಲ್ ಜೋಶ್ (34) ಒಂದು ದಿನ ಬಸಾಪುರದಲ್ಲಿ ವಾಸವಾಗಿ, ಡಿ. 17ರಂದು ತಾಣಗಳ ಸುತ್ತಾಟಕ್ಕೆ ಹೊರಗಡೆ ಹೋಗಿದ್ದಾಗ ನಾಪತ್ತೆಯಾಗಿದ್ದರು.ಈ ಕುರಿತು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎರಡು ದಿನಗಳ ನಿರಂತರ ಕಾರ್ಯಾಚರಣೆ ಬಳಿಕ ಶುಕ್ರವಾರ ಸಾಣಾಪುರ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

