ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಕೇಪು ಗ್ರಾಮದಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ಶನಿವಾರ ದಾಳಿ ನಡೆಸಿದ್ದು, 16 ಜನರನ್ನು ವಶಕ್ಕೆ ಪಡೆದಿದ್ದಾರೆ. ಕೋಳಿ ಅಂಕಕ್ಕೆ ಬಳಸಿದ್ದ 22 ಹುಂಜಗಳನ್ನು ಹಾಗೂ ಬಾಲುಗಳನ್ನು (ಚೂಪಾದ ಕತ್ತಿಗಳನ್ನು) ವಶಪಡಿಸಿಕೊಂಡಿದ್ದಾರೆಕೋಳಿ ಅಂಕದ ಸ್ಥಳದಲ್ಲಿ ಹಾಜರಿದ್ದ ಹಾಗೂ ಕಾನೂನು ಬಾಹಿರವಾದ ಕೋಳಿ ಅಂಕವನ್ನು ಮುಂದುವರಿಸುವಂತೆ ಜನರನ್ನು ಪ್ರಚೋದಿಸಿ ದುಷ್ಪ್ರೇರಣೆ ನೀಡಿದ ಆರೋಪದ ಮೇಲೆ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧವೂ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಯಾವುದೇ ಪರವಾನಗಿ ಪಡೆಯದೇ, ಕಾನೂನು ಬಾಹಿರ ಕೃತ್ಯಕ್ಕೆ ಅನುವು ಮಾಡಿಕೊಟ್ಟ ಆರೋಪದ ಮೇಲೆ ಜಾಗದ ಮಾಲೀಕ ಮರಳೀಧರ ರೈ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

