ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಿಸಿದ್ದ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಶನಿವಾರ ನಡೆದ ಕಾರ್ಯಾಚರಣೆಯಲ್ಲಿ ಒ.ಎಂ.ಬಿ.ಆರ್. ಬಡಾವಣೆಯಲ್ಲಿ ಸುಮಾರು 50 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.ಬಾಣಸವಾಡಿ ಗ್ರಾಮದ ಸರ್ವೆ ನಂ. 227/2 ಮತ್ತು 227/4ರಲ್ಲಿ 1 ಎಕರೆ 24 ಗುಂಟೆ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಿಸಿದ್ದ ಕಟ್ಟಡಗಳು, ಶೆಡ್‌ಗಳನ್ನು ತೆರವುಗೊಳಿಸಿ 50 ಕೋಟಿ ರೂ. ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ, ಅಭಿಯಂತರ ಅಧಿಕಾರಿ-3, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಇವರುಗಳನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

