Breaking News

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮಂಡ್ಯ: ಮನೆಯಲ್ಲಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.ಮಂಡ್ಯದ ಪಾಂಡವಪುರ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪೂಜಾರಿ ಕೃಷ್ಣ ಎಂಬುವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಕ್ರೌರ್ಯ ಮರೆದಿದ್ದಾರೆ.ಕೃಷ್ಣ ಅವರು ಜಮೀನಿಗೆ ಹೋದ ಸಂದರ್ಭದಲ್ಲಿ, ಮನೆಯಲ್ಲಿ ಯಾರೂ ಇಲ್ಲದ್ದನ್ನು ಮನಗಂಡ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಈ ಘಟನೆಯಿಂದ ಮನೆಯಲ್ಲಿದ್ದ ಹಣ, ಚಿನ್ನ ಸೇರಿ ಹಲವು ವಸ್ತುಗಳು ನಾಶವಾಗಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *