ಬೆಂಗಳೂರು: ಅನುಮಾಸ್ಪದವಾಗಿ ಆಯುರ್ವೇದಿಕ್ ವೈದ್ಯೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಾಜರಹಳ್ಳಿ ನಿವಾಸಿ ಶೂಲಿ ಮಂಡೋಲಿ (32) ಸಾವನ್ನಪ್ಪಿದ ವೈದ್ಯೆಯಾಗಿದ್ದು,ಡಿಸೆಂಬರ್ 19ರಂದು ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ಹೋಗಿದ್ದ ಮೃತಳು ಚಿಕಿತ್ಸೆ ಪಡೆದು ಮನೆಗೆ ವಾಪಸ್ ಬಂದಿದ್ಲು. ಆದ್ರೆ ಮರುದಿನ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ.ಇನ್ನೂ ಈ ಸಾವಿಗೆ ಪತಿ ಅನೀರ್ ಬನ್ ವಿರುದ್ಧ ಮೃತಳ ಕುಟುಂಬಸ್ಥರಿಂದ ದೂರು ನೀಡಲಾಗಿದೆ.. ವರದಕ್ಷಿಣೆ ಕಿರುಕುಳ ಎಂದು ಆರೋಪಿಸಲಾಗಿದ್ದು, ದೂರಿನ ಅನ್ವಯ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

