ಮಡಿಕೇರಿ: ಪಿರಿಯಾಪಟ್ಟಣದಿಂದ ಕೇರಳದ ಕಸಾಯಿಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಜಾಲವನ್ನು ವೀರಾಜಪೇಟೆ ನಗರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಕೇರಳದ ತಳಿಪರಂಬ ಮೂಲದ ಪಿ.ಪಿ. ಸಾದಿಕ್ (38) ಮತ್ತು ಅಬ್ದುಲ್ ಅಹಮ್ಮದ್ ತಂಙಳ್ (34) ಅವರನ್ನು ಬಂಧಿಸಿದ್ದಾರೆ.ಆರೋಪಿಗಳು ಪಿರಿಯಾಪಟ್ಟಣ ತಾಲೂಕಿನ ವಿವಿಧ ಗ್ರಾಮಗಳಲ್ಲಿ ರೈತರಿಂದ ದನ ಕರುಗಳನ್ನು ಖರೀದಿಸಿ ಕೇರಳಕ್ಕೆ ಸಾಗಿಸಲು ಸಂಚು ರೂಪಿಸಿದ್ದರು. ಪೊಲೀಸರ ಕಣ್ಣು ತಪ್ಪಿಸಲು ಲಾರಿಯಲ್ಲಿ ಹತ್ತಕ್ಕೂ ಹೆಚ್ಚು ಜಾನುವಾರುಗಳನ್ನು ತುಂಬಿಸಿ, ಅವುಗಳ ಮೇಲೆ ಆಲೂಗಡ್ಡೆ ಮೂಟೆಗಳನ್ನು ಪೇರಿಸಿ ಯಾರಿಗೂ ಅನುಮಾನ ಬರದಂತೆ ವ್ಯವಸ್ಥೆ ಮಾಡಿಕೊಂಡಿದ್ದರು. ದನಗಳ ಸಾಗಾಟದ ಬಗ್ಗೆ ಮಾಹಿತಿ ಪಡೆದ ಗೋರಕ್ಷಕರು ಪೆರುಂಬಾಡಿ ಪೊಲೀಸ್ ತಪಾಸಣೆ ಕೇಂದ್ರದ ಬಳಿ ಕಾಯುತ್ತಿದ್ದರು. ಮುಂಜಾನೆ ಲಾರಿ ಅಲ್ಲಿಗೆ ತಲುಪುತ್ತಿದ್ದಂತೆ ತಡೆದು ತಪಾಸಣೆ ನಡೆಸಿದಾಗ ಆಲೂಗಡ್ಡೆ ಮೂಟೆಗಳ ಅಡಿಯಲ್ಲಿ ಕಟ್ಟಿಹಾಕಿದ್ದ ಗೋವುಗಳು ಪತ್ತೆಯಾದವು. ತತ್‌ಕ್ಷಣ ವೀರಾಜಪೇಟೆ ನಗರ ಠಾಣಾಧಿಕಾರಿ ಪ್ರಮೋದ್ ಮತ್ತು ಸಿಬಂದಿ ಸ್ಥಳಕ್ಕೆ ಧಾವಿಸಿ ಆರೋಪಿಗಳನ್ನು ಬಂಧಿಸಿ, ಲಾರಿ ಹಾಗೂ ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

