Breaking News

ರೌಡಿಶೀಟರ್ ಜೊತೆಗೆ ನಿಕಟ ನಂಟು: ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಸಸ್ಪೆಂಡ್‌..

ಪೊಲೀಸರನ್ನು ಕಂಡರೆ ರೌಡಿಗಳು ಹೆದರುವುದು ಸಾಮಾನ್ಯ. ಆದರೆ ಪೊಲೀಸರೇ ಸಮಾಜಘಾತುಕ ಶಕ್ತಿಗಳೊಡನೆ ಕೈಜೋಡಿಸಿದರೆ ಬೇಲಿಯೇ ಎದ್ದು ಹೊಲ ಮೇಯ್ದಂತಲ್ಲವೇ? ಇಂಥದ್ದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ . ಯಲಹಂಕ ನ್ಯೂಟೌನ್‌ ಪೊಲೀಸ್‌ ಠಾಣೆಯ ಪಿಎಸ್‌ಐ ನಾಗರಾಜ್‌ ತಮ್ಮ ವರ್ತನೆಯಿಂದ ಈಗ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ…ಸಮಾಜ ಘಾತುಕ ಮತ್ತು ರೌಡಿ ಚಟುವಟಿಕೆ ನಡೆಸುವ , ಕ್ರಿಮಿನಲ್ ಹಿನ್ನಲೆಯುಳ್ಳವರನ್ನು

ರೌಡಿಶೀಟರ್‌ ದಾಸ ಮತ್ತು ಅವನ ಸಂಗಡಿಗರನ್ನು ಮನೆಗೆ ಕರೆಸಿ ಬರ್ತ್‌ಡೇ ಆಚರಿಸಿ ಪಿಎಸ್‌ಐ ನಾಗರಾಜ್‌ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಹಿನ್ನೆಲಯಲ್ಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.ದಾಸ ನ ವಿರುದ್ದ ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ ಹತ್ತಾರು ಪ್ರಕರಣಗಳು ದಾಖಲಾಗಿವೆ. ಲ್ಯಾಂಡ್ ಗ್ರಾಬಿಂಗ್, ಹಲ್ಲೆ , ಬೆದರಿಕೆ ಹಾಕಿದಂತಹ ಗಂಭೀರ ಪ್ರಕರಣಗಳೂ ಸೇರಿದಂತೆ ರಾಜಾನುಕುಂಟೆ, ಚಿಕ್ಕಜಾಲ. ಯಲಹಂಕ ನ್ಯೂಟೌನ್ ,ಸೇರಿ ಹಲವಾರು ಠಾಣೆ ಯಲ್ಲಿ ಆತ ಆರೋಪಿತ ವ್ಯಕ್ತಿಯಾಗಿದ್ದಾನೆ. ಇಂಥವನೊಂದಿಗೆ ಪೊಲೀಸ್‌ ಪಿಎಸ್‌ಐ ರಾಜಾರೋಷವಾಗಿ ಗುರುತಿಸಿಕೊಂಡಿರುವುದು ಜನರಲ್ಲಿ ಆತಂಕ ಹುಟ್ಟು ಹಾಕಿದೆ.ಈ ಘಟನೆ ಬಗ್ಗೆ ವರದಿ ನೀಡುವಂತೆ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಸೂಚಿಸಿದ್ದರು. ಈ ಬಗ್ಗೆ ವರದಿ ಪಡೆದು ಪೂರ್ವ ವಲಯ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಅಮಾನತು ಆದೇಶ ಮಾಡಿದ್ದಾರೆ. ಅಲ್ಲದೇ ಈ ವರ್ತನೆ ಪೊಲೀಸ್ ಇಲಾಖೆಯ ಶಿಸ್ತಿಗೆ ವಿರುದ್ದ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.ಮುಂದೆ ಯಾವ ಪೊಲೀಸ್ ಅಧಿಕಾರಿಗಳು ಸಮಾಜ ಘಾತುಕ ಹಾಗು ರೌಡಿ ಚಟುವಟಿಕೆ ಗಳಲ್ಲಿ ಸಕ್ರವಾಗಿದ್ದವರ ಜೊತೆಗೆನ ಸ್ನೇಹ, ವ್ಯವಹಾರ, ಪಾರ್ಟಿ ಗಳನ್ನು ಸಹಿಸಲ್ಲಾ ಎಂದು ಬೆಂಗಳೂರು ಪೊಲೀಸರಿಗೆ ಕಮಿಷನರ್ ಈ ಮೂಲಕ ಸಂದೇಶ ರವಾನಿಸಿದ್ದಾರೆ.ಆಟಾಡೋ ಮಕ್ಕಳನ್ನ ನೋಡಿದ್ರೆ ನನಗೆ ಹಿಂಸೆಯಾಗುತ್ತೆ – ಪೊಲೀಸರ ಬಳಿ ಬಾಯ್ಬಿಟ್ಟ ಸೈಕೋ!ಬೆಂಗಳೂರು: ಮನೆಯ ಎದುರು ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಕಾಲಿನಿಂದ ಒದ್ದಿದ್ದ ಆರೋಪಿಯನ್ನು ಬೆಂಗಳೂರು ಬನಶಂಕರಿ(banashankari) ಠಾಣೆಯ ಪೊಲೀಸರು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಈತ ಬಡಾವಣೆಯ ರಸ್ತೆಯಲ್ಲಿ ಆಟವಾಡುತ್ತಿದ್ದ ಪುಟ್ಟ ಮಕ್ಕಳನ್ನು ಕಂಡರೆ ಫುಟ್‌ಬಾಲ್‌ನಂತೆ ಸಾಯುವಂತೆ ಒದೆಯೋದು, ಗುದ್ದೋದು, ಬೈಕ್ ಹತ್ತಿಸೋದು, ತಲೆ ಚಚ್ಚುವುದನ್ನು ಮಾಡುತ್ತಿದ್ದ ಎನ್ನಲಾಗಿದೆ.ಬನಶಂಕರಿ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಮಕ್ಕಳು ರಸ್ತೆಯಲ್ಲಿ ಆಟವಾಡುತ್ತಿದ್ದರೆ ನನಗೆ ತುಂಬಾ ಹಿಂಸೆಯಾಗುತ್ತದೆ, ಇರಿಟೇಟ್ ಆಗುತ್ತದೆ. ನನಗೆ ಮಕ್ಕಳನ್ನು ನೋಡುವುದಕ್ಕೆ ಆಗುವುದಿಲ್ಲ, ಅದಕ್ಕಾಗಿಯೇ ಅವರನ್ನು ಒದ್ದೆ ಮತ್ತು ಕೈಯಿಂದ ಹೊಡೆದೆ ಎಂದು ರಂಜನ್ ಒಪ್ಪಿಕೊಂಡಿದ್ದಾನೆ.ಘಟನೆಯ ವಿವರಆರೋಪಿ ರಂಜನ್ (35) ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದು, ಕಳೆದ ಕೆಲವು ದಿನಗಳಿಂದ ಜಿಮ್‌ಗೆ ಹೋಗುವುದನ್ನು ಬಿಟ್ಟು ಮನೆಯಲ್ಲೇ ಉಳಿದಿದ್ದನು. ಇತ್ತೀಚೆಗೆ ಮನೆಯ ಪಕ್ಕದಲ್ಲಿ ಮಗು ಆಟವಾಡುತ್ತಿದ್ದಾಗ ಏಕಾಏಕಿ ಬಂದ ರಂಜನ್, ಮಗುವಿನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ಮಗುವನ್ನು ಕಾಲಿನಿಂದ ಒದ್ದು ಬೀಳಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರಂಭದಲ್ಲಿ ಪೋಷಕರು ಪೊಲೀಸರಿಗೆ ದೂರು ನೀಡಿದಾಗ, ಪೊಲೀಸರು ಈತನನ್ನು ಕರೆಸಿ ಎಚ್ಚರಿಕೆ ನೀಡಿ ಕಳಿಸಿದ್ದರು.ಆದರೆ, ಪೋಷಕರು ಮನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಪೂರ್ಣವಾಗಿ ಪರಿಶೀಲಿಸಿದಾಗ ರಂಜನ್ ಕೇವಲ ಒಂದು ಮಗುವಿನ ಮೇಲೆ ಮಾತ್ರವಲ್ಲದೆ, ದಾರಿಯಲ್ಲಿ ಹೋಗುವ ಹಲವು ಮಕ್ಕಳ ಮೇಲೆ ಇದೇ ರೀತಿ ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿದೆ.ಠಾಣಾ ವ್ಯಾಪ್ತಿಯ ತ್ಯಾಗರಾಜನಗರದ ನಿವಾಸಿ ದೀಪಿಕಾ ಜೈನ್ ಅವರು ನೀಡಿದ ದೂರಿನ ಮೇರೆಗೆ ಬಿಎನ್‌ಎಸ್ ಸೆಕ್ಷನ್ 115(2)ರ ಅಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.ಭಾನುವಾರ ಮಧ್ಯಾಹ್ನ 1ರ ಸುಮಾರಿಗೆ ತ್ಯಾಗರಾಜನಗರದ ಹಳೇ ಅಂಚೆ ಕಚೇರಿಯ ರಸ್ತೆಯಲ್ಲಿರುವ ತಮ್ಮ ಅಣ್ಣನ ಮನೆಗೆ ದೀಪಿಕಾ ಜೈನ್ ಅವರು ಐದು ವರ್ಷದ ಪುತ್ರ ನೀವ್ ಜೈನ್ ಕರೆದುಕೊಂಡು ಬಂದಿದ್ದರು. ಮನೆಯ ಎದುರು ನೀವ್ ಜೈನ್ ಇತರೆ ಮಕ್ಕಳೊಂದಿಗೆ ಆಟವಾಡುತ್ತಿದ್ದ. ಪಕ್ಕದ ಮನೆಯ ನಿವಾಸಿ, ಆರೋಪಿ ರಂಜನ್ ಏಕಾಏಕಿ ಬಂದು ನೀವ್ ಜೈನ್‌ಗೆ ಒದ್ದಿದ್ದ. ಒದ್ದ ರಭಸಕ್ಕೆ ಕೆಳಕ್ಕೆ ಬಿದ್ದ ಮಗುವಿನ ಕಾಲು, ಮುಖಕ್ಕೆ ಗಾಯವಾಗಿತ್ತು. ರಕ್ತ ಬಂದಿತ್ತು’ ಎಂದು ಪೊಲೀಸರು ಹೇಳಿದರು.ಆರೋಪಿಯ ವಿರುದ್ಧ ಬಿಎನ್‌ಎಸ್ ಸೆಕ್ಷನ್ 115(2) (ಹಲ್ಲೆ) ಅಡಿ ಪ್ರಕರಣ ದಾಖಲಾಗಿದ್ದು, ಈ ಸೆಕ್ಷನ್ ಅಡಿಯಲ್ಲಿ ಒಂದು ವರ್ಷ ಶಿಕ್ಷೆ ಹಾಗೂ 10 ಸಾವಿರ ರೂ. ದಂಡಕ್ಕೆ ಅವಕಾಶವಿದೆ. ಇದು ಜಾಮೀನು ನೀಡಬಹುದಾದ ಸೆಕ್ಷನ್ ಆಗಿದ್ದರಿಂದ, ಪೊಲೀಸರು ಸ್ಟೇಷನ್ ಬೇಲ್ ಮೇಲೆ ಆತನನ್ನು ಬಿಟ್ಟು ಕಳಿಸಿದ್ದಾರೆ. ಸದ್ಯ ಆರೋಪಿ ಹೊರಗಿದ್ದರೂ, ಇಂತಹ ರಾಕ್ಷಸ ಪ್ರವೃತ್ತಿಯ ವ್ಯಕ್ತಿಯಿಂದ ಸಮಾಜಕ್ಕೆ, ಅದರಲ್ಲೂ ಮುಖ್ಯವಾಗಿ ಮಕ್ಕಳಿಗೆ ಅಪಾಯವಿದೆ ಎಂಬ ಆತಂಕ ಸ್ಥಳೀಯರಲ್ಲಿ ಮನೆ ಮಾಡಿದೆ.

Share News

About Shaikh BigTv

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *