Breaking News

ಗಜೇಂದ್ರಗಡ: ಲೋಕಾ ಬಲೆಗೆ ಬಿದ್ದ ಮುಖ್ಯಶಿಕ್ಷಕ

ಕರಾಟೆ ತರಬೇತುದಾರನಿಗೆ ಗೌರವಧನ ಮಂಜೂರು ಮಾಡಲು ₹5 ಸಾವಿರ ಲಂಚ ಕೇಳಿದ್ದ ಮುಶಿಗೇರಿ ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್‌ ಶಾಲೆಯ ಮುಖ್ಯಶಿಕ್ಷಕ ಕಳಕಪ್ಪ ರಾಜೂರ ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಕರಾಟೆ ತರಬೇತುದಾರ ಆನಂದ ವಿರುಪಾಕ್ಷಪ್ಪ ವಾಲ್ಮೀಕಿ 8 ಮತ್ತು 9ನೇ ತರಗತಿ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನೀಡಿದ್ದರು.ಗೌರವಧನ ₹9 ಸಾವಿರ ಮಂಜೂರು ಮಾಡಲು ಕೋರಿದ್ದರು. ಅದಕ್ಕಾಗಿ ಲಂಚ ಕೇಳಿದ್ದ ಕಳಕಪ್ಪ, ಸೋಮವಾರ ₹4 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಗದಗ ಲೋಕಾಯುಕ್ತ ಡಿವೈಎಸ್‌ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *