Breaking News

ಉಡುಪಿ: 28 ನಕ್ಸಲ್‌ ಪ್ರಕರಣ ವಿಲೇವಾರಿ

ಜಿಲ್ಲೆಯಲ್ಲಿ 68 ನಕ್ಸಲ್‌ ಪ್ರಕರಣಗಳಲ್ಲಿ 39 ಪ್ರಕರಣಗಳು ಕೋರ್ಟ್ ವಿಚಾರಣೆಯಲ್ಲಿದ್ದು, 28 ಪ್ರಕರಣಗಳು ವಿಲೇವಾರಿ ಆಗಿವೆ. 1 ಪ್ರಕರಣದಲ್ಲಿ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸಲು ಬಾಕಿ ಇದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ.ಮೂವರು ಆರೋಪಿಗಳ ವಿರುದ್ಧ ಹೆಚ್ಚುವರಿ ದಾಖಲಾತಿ ಸಲ್ಲಿಸಲು ಬಾಕಿ ಇದೆ. ಒಂದು ಪ್ರಕರಣ ಸಿಐಡಿ ತನಿಖೆಯಲ್ಲಿದೆ. ಕಳೆದ 6 ತಿಂಗಳಲ್ಲಿ 39 ಪ್ರಕರಣ ಗಳಲ್ಲಿ 11 ಜನ ನಕ್ಸಲ್‌ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. 39 ಪ್ರಕರಣಗಳಲ್ಲಿ ಹಾಜರುಪಡಿಸಿದ ಆರೋಪಿಗಳ ವಿರುದ್ಧ ನ್ಯಾಯಾಲಯ ದಲ್ಲಿ ಚಾರ್ಜ್‌ ಪ್ರೇಮ್‌ ಆಗಿದ್ದು, ನ್ಯಾಯಾಲಯದ ವಿಚಾರಣೆಯಲ್ಲಿದೆ ಎಂದು ತಿಳಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *