Breaking News

10ನೇ ತರಗತಿ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ : ಮಗುವಿಗೆ ಜನ್ಮ ನೀಡಿದ ಬಾಲಕಿ, ಆರೋಪಿ ಅರೆಸ್ಟ್!

ಹಾಸನ : ಕಳೆದ ಕೆಲವು ದಿನಗಳ ಹಿಂದೆ ಶಿವಮೊಗ್ಗ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರು ಮಗುವಿಗೆ ಜನ್ಮ ನೀಡಿದ್ದ ಘಟನೆ ವರದಿಯಾಗಿತ್ತು. ಈ ಘಟನೆ ಮಾಸುವ ಮುನ್ನವೇ ಹಾಸನ ಜಿಲ್ಲೆಯಲ್ಲೂ ಅಂತಹದ್ದೇ ವರದಿಯಾಗಿದೆ.ಅಪ್ರಾಪ್ತ ಬಾಲಕಿಯೊಬ್ಬಳಿಗೆ ನಿತ್ಯ ಚಾಕೋಲೆಟ್​ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ವಾಹನ ಚಾಲಕನಾಗಿದ್ದ ರಂಜಿತ್ ಎಂಬಾತ 8 ತಿಂಗಳಿನಿಂದ ಲೈಂಗಿಕ ದೌರ್ಜನ್ಯವೆಸಗಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆರೋಪಿಯನ್ನ ಚನ್ನರಾಯಪಟ್ಟಣ ನಗರಠಾಣೆಯ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಅಲ್ಲದೇ, ನ್ಯಾಯಾಂಗ ಬಂಧನಕ್ಕೂ ಒಪ್ಪಿಸಿದ್ದಾರೆ. ಇನ್ನು ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಕಾಲ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಶೀಘ್ರ ಒಪ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹಾಸನ ಡಿಹೆಚ್​ಒ ಅನಿಲ್ ತಿಳಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *