Breaking News

ಹಿರಿಯೂರು ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್‌ಗೆ ಬೆಂಕಿ, 10 ಮಂದಿ ಸಜೀವ ದಹನ

ಚಿತ್ರದುರ್ಗ: ಲಾರಿ ಡಿಕ್ಕಿಯಿಂದಾಗಿ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾಗಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಘಟನೆ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ. ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತಿದ್ದ ಲಾರಿ ಬೆಂಗಳೂರಿನಿಂದ ಶಿವಮೊಗ್ಗ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್‌ ಕೋಚ್ ಬಸ್ಸಿಗೆ ಗುದ್ದಿದೆ.ಲಾರಿ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯಿಂದ ಡಿವೈಡರ್ ದಾಟಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಬಸ್ಸಿಗೆ ಬೆಂಕಿ ಹೊತ್ತುಕೊಂಡು 10ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ 9 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳು ಹಿರಿಯೂರು ಹಾಗೂ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *