ಹುಬ್ಬಳ್ಳಿ: ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ಅದರಗುಂಚಿ ಕ್ರಾಸ್ ಬಳಿಯ ವಾಹನಗಳ ಆಲಂಕಾರಿಕ ವಸ್ತುಗಳ ಅಂಗಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ, ಸುಮಾರು ₹40 ಲಕ್ಷ ಮೌಲ್ಯದ ಸಾಮಗ್ರಿಗಳು ಸುಟ್ಟುಕರಕಲಾಗಿವೆ.ಬುಧವಾರ ಮಧ್ಯಾಹ್ನ ಘಟನೆ ನಡೆದಿದ್ದು, ಬೆಂಕಿಯ ಜ್ವಾಲೆ ಬಾನೆತ್ತರಕ್ಕೆ ಹಬ್ಬಿತ್ತು.ಅದರಿಂದ ದಟ್ಟವಾದ ಹೊಗೆ ಎದ್ದಿದ್ದು ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಇಬ್ರಾಹಿಂ ಅಂಗುಖಾನ್, ನಾಸೀರ್, ಫಾರೂಕ್ ಹಾಗೂ ಶಬೀರ್ ಅವರಿಗೆ ಸೇರಿದ ಅಂಗಡಿ ಇದಾಗಿದೆ. ಗ್ರಾಮೀಣ ಠಾಣೆ ಪೊಲೀಸರು ಹಾಗೂ ಆಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

