ಮಡಂತ್ಯಾರು: ಕೊಯ್ಯೂರು ಗ್ರಾಮದ ಅದೂರು ಪೆರಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಮೇಶ್ ಅವರು ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುವ ವೇಳೆ ಸರಕಾರಿ ಪ್ರೌಢ ಶಾಲಾ ಸಮೀಪ ಹಿಂದಿನಿಂದ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದ ಸ್ಥಳೀಯ ಯುವಕ ಶಿಕ್ಷಕನಿಗೆ ಬಲವಾಗಿ ಢಿಕ್ಕಿ ಹೊಡೆದ ಘಟನೆ ಸಂಭವಿಸಿದೆ.ಈ ಘಟನೆಯಲ್ಲಿ ಶಾಲಾ ಶಿಕ್ಷಕ ರಮೇಶ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡರು. ತತ್‌ಕ್ಷಣ ಸ್ಥಳೀಯರು ಅವರನ್ನು ಬೆಳ್ತಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಬೆಳ್ತಂಗಡಿ ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

